ಶಿಸ್ತು, ಸಮಯ ಪಾಲನೆ, ಸುಸಂಸ್ಕೃತ ನಡವಳಿಕೆಯಿಂದ ಚಿತ್ರರಂಗದಲ್ಲಿ ಎಲ್ಲರ ಅಭಿಮಾನಕ್ಕೆ ಪಾತ್ರರಾಗಿದ್ದ ವ್ಯಕ್ತಿ ಚಾಮಯ್ಯ ಮೇಷ್ಟ್ರು ಕೆ. ಎಸ್. ಅಶ್ವಥ್ ..!!

Share

ಕನ್ನಡ ಚಿತ್ರರಂಗದಲ್ಲಿ ಚಾಮಯ್ಯ ಮೇಷ್ಟ್ರು ಎಂದೇ ಖ್ಯಾತರಾದ ಕಲಾವಿದ ಕೆ.ಎಸ್ ಅಶ್ವಥ್ (ಕರಗದಹಳ್ಳಿ ಸುಬ್ಬರಾಯಪ್ಪ ಅಶ್ವಥ್) ಅವರು ಮೈಸೂರಿನಲ್ಲಿ ಜನಿಸಿದರು. ನಾಗರಹಾವು ಚಿತ್ರದ ಚಾಮಯ್ಯ ಮೇಷ್ಟ್ರ ಪಾತ್ರ ಅವರನ್ನು ಜನಮಾನಸದಲ್ಲಿ ಸದಾಕಾಲ ಇರುವಂತೆ ಮಾಡಿತು. ನಾಯಕನಾಗಿ ಚಿತ್ರರಂಗ ಪ್ರವೇಶ ಮಾಡಿದರೂ ಸಹ ಮುಂದೆ ಪ್ರಸಿದ್ದಿ ಪಡೆದದ್ದು ಮಾತ್ರ ಪೋಷಕ ನಟನಾಗಿ.

1955ರಲ್ಲಿ ನಿರ್ಮಾಣವಾದ ‘ಸ್ರೀ ರತ್ನ’ ಚಿತ್ರದ ನಾಯಕನಾಗಿ ..!!!!

1955ರಲ್ಲಿ ನಿರ್ಮಾಣವಾದ ‘ಸ್ರೀ ರತ್ನ’ ಚಿತ್ರದ ನಾಯಕನಾಗಿ ಬೆಳಕಿಗೆ ಬಂದ ಇವರು ಸುಮಾರು ಐದು ದಶಕಗಳ ಅವಧಿಯಲ್ಲಿ 350ಕ್ಕಿಂತಲೂ ಹೆಚ್ಚು ಚಲನಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಶಿಸ್ತು, ಸಮಯಪಾಲನೆ, ಸುಸಂಸ್ಕೃತ ನಡವಳಿಕೆಯಿಂದ ಚಿತ್ರ ನಿರ್ಮಾಣವಲಯದಲ್ಲಿ ಎಲ್ಲರ ಅಭಿಮಾನಕ್ಕೆ ಪಾತ್ರರಾದ ವ್ಯಕ್ತಿ ಅಶ್ವತ್. ಅವರ ಹಿರಿಯರು ಹೊಳೆನರಸೀಪುರ ತಾಲ್ಲೂಕಿನ ಕರಗದಹಳ್ಳಿಯವರು. ತಂದೆ ಸುಬ್ಬರಾಯರು. ಮೊದಲ ಹೆಸರು ಅಶ್ವತ್ಥನಾರಾಯಣ. ಓದಿದ್ದು ಇಂಟರಮಿಡಿಯಟವರೆಗೆ. ಸ್ವಾತಂತ್ರ್ಯ ಹೋರಾಟದಲ್ಲಿ ಸಹಭಾಗಿ, ಆಹಾರ ಇಲಾಖೆಯಲ್ಲಿ ನೌಕರಿ(1944).

ನಾಟಕದ ಗೀಳು, ಆಕಾಶವಾಣಿಯಲ್ಲಿ ನಾಟಕ ವಿಭಾಗದಲ್ಲಿ ದುಡಿಮೆ,,,,,,;

ನಾಟಕದ ಗೀಳು, ಆಕಾಶವಾಣಿಯಲ್ಲಿ ನಾಟಕ ವಿಭಾಗದಲ್ಲಿ ದುಡಿಮೆ; ನಾಟಕ ವಿಭಾಗದ ಮುಖ್ಯಸ್ಥರಾಗಿದ್ದ ಎನ್.ಎಸ್. ವಾಮನರಾಯರಿಂದ ಅಭಿನಯದಲ್ಲಿ ತರಬೇತಿ ಪಡೆಯುವ ಅವಕಾಶ. ಅಶ್ವತ್ಥ್ ಅವರಿಗೆ ಚಲನಚಿತ್ರ ಸೇರಬೇಕೆಂಬ ಕಲ್ಪನೆಯೇ ಇರಲಿಲ್ಲ. ಅವಕಾಶ ಅದಾಗಿಯೇ ಬಂದಿತು. ನಾಟಕದಲ್ಲಿನ ಇವರ ಅಭಿನಯ ನೋಡಿ ಮೆಚ್ಚಿದ ಹಿರಿಯ ನಿರ್ದೇಶಕ ಕೆ.ಸುಬ್ರಹ್ಮಣ್ಯಂ ಅವರಿಂದ ಚಿತ್ರರಂಗಕ್ಕೆ ಆಹ್ವಾನ. ಮೈಸೂರಿನ ಪ್ರಿಮಿಯರ ಸ್ಟೂಡಿಯೋದಲ್ಲಿ ತಯಾರಾದ, ಭಾಗಶಃ ವರ್ಣದಲ್ಲಿ ಚಿತ್ರಣವಾದ ‘ಸ್ತ್ರೀ ರತ್ನ’ ಚಿತ್ರದಲ್ಲಿ ನಾಯಕ. ನಂತರ, ಚಿತ್ರರಂಗದಲ್ಲೆ ಮುಂದುವರೆಯುವ ನಿರ್ಧಾರ. ಆದರೆ ಆ ಅವಧಿಯಲ್ಲಿ ಕನ್ನಡ ಚಿತ್ರ ನಿರ್ಮಾಣ ಚಟುವಟಿಕೆ ಮಂದಗತಿಯಲ್ಲಿ ಸಾಗುತ್ತಿತ್ತು. ಆದರೂ ಚಿತ್ರರಂಗದ ಅಭಿನಯವನ್ನೇ ವೃತ್ತಿಯಾಗಿ ಸ್ವೀಕರಿಸಲು ಸಂಕಲ್ಪಿಸಿದ್ದ ಅಶ್ವತ್ಥ್, ಆಗ ಕನ್ನಡ ಚಿತ್ರ ನಿರ್ಮಾಣದ ಕೇಂದ್ರವಾಗಿದ್ದ ಮದರಾಸಿನಲ್ಲೇ ನೆಲೆಸಲು ನಿರ್ಧರಿಸಿದರು.

ನಾಯಕ ಪಾತ್ರಗಳಿಂದ ಸರಿದು ಪೋಷಕ ಪಾತ್ರಗಳಲ್ಲಿ ಅಭಿನಯಿಸುವ ಸಂಕಲ್ಪ…!

ನಾಯಕ ಪಾತ್ರಗಳಿಂದ ಸರಿದು ಪೋಷಕ ಪಾತ್ರಗಳಲ್ಲಿ ಅಭಿನಯಿಸುವ ಸಂಕಲ್ಪ ಮಾಡಿದರು (1960). ಇದರಿಂದ ಅವರ ಬಹುಮುಖ ಪ್ರತಿಭೆಯು ಪ್ರಕಾಶಕ್ಕೆ ಮುಕ್ತ ಅವಕಾಶ ದೊರೆಯಿತು. ಆರಂಭದ ದಿನಗಳಲ್ಲಿ ತಯಾರಾಗುತ್ತಿದ್ದದು ಹೆಚ್ಚಾಗಿ ಪೌರಾಣಿಕ ಹಾಗೂ ಭಕ್ತಿ ಪ್ರಧಾನ ಚಿತ್ರಗಳು. ಪೌರಾಣಿಕ ಭಕ್ತಿ ಪ್ರಧಾನ ಚಿತ್ರಗಳಲ್ಲಿ ನಾರದನ ಪಾತ್ರಗಳು ಅರಸಿ ಬಂದವು. ‘ಮಹಿಷಾಸುರ ಮರ್ದಿನಿ’, ‘ಸ್ವರ್ಣಗೌರಿ’, ‘ದಶಾವತಾರ’, ‘ನಾಗಾರ್ಜುನ’-ಇವೇ ಮೊದಲಾದ ಚಿತ್ರಗಳಲ್ಲಿ ಅಶ್ವತ್ಥ್ ಅವರ ನಾರದನ ಪಾತ್ರ ಜನಮೆಚ್ಚುಗೆ ಪಡೆಯಿತು.

ಶಾಶ್ವತವಾಗಿ ಪ್ರಧಾನ ಪೋಷಕ ಪಾತ್ರಗಳಿಗೆ ಆಯ್ಕೆ, ಅಶ್ವತ್ಥ್-ಪಂಢರಿಬಾಯಿ ಜೋಡಿ ಅತ್ಯಂತ ಜನಪ್ರಿಯ...!!!

ಅಶ್ವತ್ಥ್ ವೈವಿಧ್ಯಮಯ ಪೋಷಕ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಆ ಪಾತ್ರಗಳಿಗೆ ಜೀವ ತುಂಬಿದ್ದಾರೆ. ಜನರಿಗೆ ಅಪ್ತವಾದುದು ತಂದೆಯ ಪಾತ್ರ; ಮನೆಯ ಹಿರಿಯಣ್ಣನ ಪಾತ್ರ, ‘ಗಾಳಿಗೋಪುರ’ ಚಿತ್ರದಿಂದ ಶಾಶ್ವತವಾಗಿ ಪ್ರಧಾನ ಪೋಷಕ ಪಾತ್ರಗಳಿಗೆ ಆಯ್ಕೆ. ‘ನಾಗರಹಾವು’ ಚಿತ್ರದ ಚಾಮಯ್ಯ ಮೇಷ್ಟ್ರು, ಮಕ್ಕಳಿಲ್ಲದ ಮೇಷ್ಟ್ರು. ತಾನು ಅತಿಯಾಗಿ ಪ್ರೀತಿಸುವ ತಂಟೆಕೋರ ವಿದ್ಯಾರ್ಥಿ. ಇವರಿಬ್ಬರ ನಡುವಣ ಮಾನವೀಯ ಸಂಬಂಧಗಳು, ಸಮಸ್ಯೆಗಳು, ದುರಂತದಲ್ಲಿ ಕೊನೆಗೊಳ್ಳುವ ಈ ಚಿತ್ರದಲ್ಲಿ ಮನಮಿಡಿಯುವಂತಹ ಅಭಿನಯ. ‘ಕಸ್ತೂರಿ ನಿವಾಸ’ದ ನಿಷ್ಠಾವಂತ ಸೇವಕ ರಾಮಯ್ಯ, ‘ಮಗ ಮೊಮ್ಮಗ’, ‘ತಂದೆ-ಮಕ್ಕಳು’ ಚಿತ್ರದಲ್ಲಿ ತಂದೆಯಾಗಿ ನೀಡಿರುವ ಮನ ಮುಟ್ಟುವ ಅಭಿನಯ. ‘ಸರ್ವಮಂಗಳ’ ಚಿತ್ರದಲ್ಲಿ ಕುರೂಪಿ ಸುಬ್ಬರಾಯನ ಪಾತ್ರ, ಅಶ್ವತ್ಥ್ ಅವರ ಅಪ್ರತಿಮ ಪ್ರತಿಭೆಯ, ಭಾವಪೂರ್ಣ ಅಭಿನಯಕ್ಕೆ ಇವು ಕೆಲವು ನಿದರ್ಶನಗಳು. ಕುಟುಂಬದ ಯಜಮಾನ, ಒಲವಿನ ಸೋದರ, ತಂದೆ ಮೊದಲಾದ ಸಜ್ಜನಿಕೆಯ ಪಾತ್ರಗಳ ಜೊತೆಗೆ ಹಾಸ್ಯ ಪಾತ್ರಗಳಲ್ಲೂ ಖಳನಾಯಕನ ಪಾತ್ರಗಳಲ್ಲೂ ಅವರು ಸಹಜವಾಗಿ ಅಭಿನಯಿಸಿದ್ದಾರೆ. ಪುಟ್ಟ ಪಾತ್ರಗಳಲ್ಲಿ ಚೊಕ್ಕ ಅಭಿನಯ ಇದು ಅವರ ಹಿರಿಮೆ. ಪ್ರಧಾನ ಪೋಷಕ ಚಿತ್ರಗಳಲ್ಲಿ ಅಶ್ವತ್ಥ-ಪಂಢರಿಬಾಯಿ ಜೋಡಿ ಅತ್ಯಂತ ಜನಪ್ರಿಯ.

‘ನಮ್ಮ ಮಕ್ಕಳು’, ‘ನಾಗರಹಾವು’, ‘ಮುತ್ತಿನಹಾರ’ ಚಿತ್ರಗಳ ಅಭಿನಯಕ್ಕಾಗಿ ‘ಶ್ರೇಷ್ಠ ಪೋಷಕ ನಟ’ರಾಗಿ ರಾಜ್ಯ ಪ್ರಶಸ್ತಿ ಪಡೆದಿದ್ದಾರೆ.

‘ನಮ್ಮ ಮಕ್ಕಳು’, ‘ನಾಗರಹಾವು’, ‘ಮುತ್ತಿನಹಾರ’ ಚಿತ್ರಗಳ ಅಭಿನಯಕ್ಕಾಗಿ ‘ಶ್ರೇಷ್ಠ ಪೋಷಕ ನಟ’ರಾಗಿ ರಾಜ್ಯ ಪ್ರಶಸ್ತಿ ಪಡೆದಿದ್ದಾರೆ. 1993-94ನೇ ಸಾಲಿನಿನ ಡಾ.ರಾಜಕುಮಾರ್ ಪ್ರಶಸ್ತಿಗೆ ಭಾಜನರಾದ ಪ್ರಪ್ರಥಮ ನಟ-ಕೆ.ಎಸ್. ಅಶ್ವತ್ಥ್. 1995ರಲ್ಲಿ ಅಶ್ವತ್ಥ್ ಚಿತ್ರರಂಗಕ್ಕೆ ವಿದಾಯ ಹೇಳಿದ್ದರು. ಅದು ಅವರ ಅಭಿಮಾನಿ ಪ್ರೇಕ್ಷಕರಿಗೆ ಅಘಾತವಾಗಿತ್ತು. ಆದರೆ ‘ಶಬ್ದವೇಧಿ’ ಚಿತ್ರದ ಮೂಲಕ ಅವರ ಪುನರಾಗಮನವನ್ನು ಜನರು ಸಂಭ್ರಮದಿಂದ ಸ್ವಾಗತಿಸಿದರು.

ತಂದೆಯಾಗಿ, ಸಹೋದರನಾಗಿ, ಪತಿಯಾಗಿ, ತಾತನಾಗಿ, ನಾರದನಾಗಿ, ಹಳ್ಳಿಗನಾಗಿ, ಪಟ್ಟಣಿಗನಾಗಿ, ಗುರುವಾಗಿ, ಅಧಿಕಾರಿಯಾಗಿ, ಸೇವಕನಾಗಿ, ಋಷಿಯಾಗಿ ಹೀಗೆ ವಿಭಿನ್ನ ನೆಲೆಗಳಲ್ಲಿ ಅವರು ಅವರ ಪಾತ್ರಗಳಿಗೆ ನೀಡಿದ ಬೆಲೆ ಅಸದೃಶವಾದದ್ದು…!

ತಂದೆಯಾಗಿ, ಸಹೋದರನಾಗಿ, ಪತಿಯಾಗಿ, ತಾತನಾಗಿ, ನಾರದನಾಗಿ, ಹಳ್ಳಿಗನಾಗಿ, ಪಟ್ಟಣಿಗನಾಗಿ, ಗುರುವಾಗಿ, ಅಧಿಕಾರಿಯಾಗಿ, ಸೇವಕನಾಗಿ, ಋಷಿಯಾಗಿ ಹೀಗೆ ವಿಭಿನ್ನ ನೆಲೆಗಳಲ್ಲಿ ಅವರು ಅವರ ಪಾತ್ರಗಳಿಗೆ ನೀಡಿದ ಬೆಲೆ ಅಸದೃಶವಾದದ್ದು. ಅವರನ್ನು ನಾವು ನೋಡಿದ ಇಷ್ಟಪಟ್ಟ ಒಂದೆರಡು ಪಾತ್ರಗಳ ನೆಲೆಯಲ್ಲಿ ಅವಲೋಕಿಸುವುದಕ್ಕಿಂತ ತಾವು ನಟಿಸಿದ ಪಾತ್ರಗಳಲ್ಲೆಲ್ಲ ಅವರು ತುಂಬಿದ ಸಹಜತೆಯ ಆಳದಲ್ಲಿ ಅವರಿಗೆ ಇದ್ದ ಸಾಮರ್ಥ್ಯ, ಜೀವಂತಿಕೆ, ನಿಷ್ಠೆ ಜೊತೆಗೆ ಇವೆಲ್ಲಕ್ಕೂ ಮಿಗಿಲಾಗಿ ತಮ್ಮನ್ನು ಸಾಮಾನ್ಯನಂತೆ ಕಂಡುಕೊಳ್ಳುವ ವಿಧೇಯತೆ, ಬದುಕಿನ ಜೊತೆ ಹೊಂದಿದ್ದ ಸಾಮೀಪ್ಯತೆ ಇತ್ಯಾದಿಗಳಿಂದ ಅವರನ್ನು ನೋಡುವುದು ಅತ್ಯಂತ ಮಹತ್ವದ್ದೆನಿಸುತ್ತದೆ.

ಕೃಪೆ : Wikipedia

Leave a Comment