ಕನ್ನಡಿಗ ‘ಮಂಜು ನಂದನ್’ ನಿರ್ದೇಶನದ “ಮೇರಿ ಪಡೋಸನ್ ” ಹಿಂದಿ ವೆಬ್‌ಸೀರೀಸ್ ಗೆ ಎಲ್ಲೆಡೆ ಪ್ರಶಂಸೆಯ ಸುರಿಮಳೆ…!!!
” ಕನ್ನಡದ ಯುವ ನಿರ್ದೇಶಕ ‘ಮಂಜುನಂದನ್ ‘ ಬಾಲಿವುಡ್‌ನಲ್ಲಿ ಯಶಸ್ವಿ ಯಾಗಿ ಎಂಟ್ರಿಕೊಟ್ಟು, ಸೈ ಎನಿಸಿಕೊಂಡಿದ್ದಾರೆ.”
ಧಾರಾವಾಡ ಮೂಲದ ಮಂಜು ನಂದನ್ ಈಗ ಬಾಲಿವುಡ್‌ನಲ್ಲಿ ವೆಬ್‌ಸೀರೀಸ್ ಮಾಡಿದ್ದಾರೆ. ಆ ಹೊಸ ವೆಬ್‌ಸೀರೀಸ್‌ಗೆ “ಮೇರಿ ಪಡೋಸನ್” ಎಂದು ನಾಮಕರಣ ಮಾಡಲಾಗಿದೆ. ಸದ್ಯಕ್ಕೆ ಈ ವೆಬ್ ಸೀರೀಸ್ ಅವರ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಿದ್ದು, ಈಗಾಗಲೇ ಸಾಕಷ್ಟು ಮೆಚ್ಚುಗೆಯನ್ನೂ ಪಡೆದುಕೊಂಡಿದೆ. ತಮ್ಮ ನಿರ್ದೇಶನದ ಹಿಂದಿ ವೆಬ್‌ಸೀರೀಸ್ ಕುರಿತು “ನಮ್ಮ ಸೂಪರ್ ಸ್ಟಾರ್ಸ್ಸ್” ಜೊತೆ ಮಾತನಾಡಿದ ಮಂಜುನಂದನ್, “ಇದೊಂದು ಲವ್ ಕಾಮಿಡಿ ಜಾನರ್. ಈಗಿನ ವೆಬ್‌ಸೀರೀಸ್‌ಗೆ ತಕ್ಕಂತಹ ಕಥೆಯನ್ನಿಟ್ಟುಕೊಂಡು ಮಾಡಲಾಗಿದೆ.
“ಭಾರತೀಯ ಚಿತ್ರರಂಗದಲ್ಲಿ ಕನ್ನಡ ಚಿತ್ರರಂಗದ ಬಗ್ಗೆ ಒಂದಷ್ಟು ನಿರೀಕ್ಷೆ ಹೆಚ್ಚಿರುವುದು ಸ್ಪಷ್ಟ..!!!!! “
ಭಾರತೀಯ ಚಿತ್ರರಂಗದಲ್ಲಿ ಕನ್ನಡ ಚಿತ್ರರಂಗದ ಬಗ್ಗೆ ಒಂದಷ್ಟು ನಿರೀಕ್ಷೆ ಹೆಚ್ಚಿರುವುದು ಗೊತ್ತೇ ಇದೆ. ಬಾಲಿವುಡ್, ಟಾಲಿವುಡ್, ಕಾಲಿವುಡ್ ಮಾಲಿವುಡ್ ಕೂಡ ಈಗ ಕನ್ನಡ ಚಿತ್ರರಂಗದ ಕಡೆ ತಿರುಗಿ ನೋಡುವಂತಾಗಿದೆ. ಈಗಾಗಲೇ ಕನ್ನಡ ಸಿನಿಮಾಗಳು ಜೋರು ಸದ್ದು ಮಾಡಿರುವುದೇ ಪರಭಾಷಿಗರೂ ಕನ್ನಡದತ್ತ ತಿರುಗುತಿರುವುದು ಕಾರಣ. ಕನ್ನಡದ ಅನೇಕ ನಿರ್ದೇಶಕರು, ನಟ,ನಟಿಯರು ಪರಭಾಷೆಯಲ್ಲಿ ಸದ್ದು ಮಾಡುತ್ತಿದ್ದಾರೆ. ಆ ಸಾಲಿಗೆ ಈ ವೆಬ್‌ಸೀರೀಸ್‌ನಲ್ಲಿ ಬಾಲಿವುಡ್ ಕಲಾವಿದರು ಕಾಣಿಸಿಕೊಂಡಿದ್ದಾರೆ. ಮುಸ್ಕಾನ್ ಶರ್ಮ, ವಿಹಾನ್ ಗೋಯೆಲ್, ಸ್ವಾತಿ ಶರ್ಮ, ಜಸ್ವೀಲ್ ಅರೋರ ಇತರರು ನಟಿಸಿದ್ದಾರೆ.
ಈಗಾಗಲೇ ಬಿಡುಗಡೆಯಾಗಿರುವ ಈ ವೆಬ್‌ಸೀರೀಸ್ ಕೆಲವೇ ದಿನಗಳಲ್ಲಿ ಭಾರಿ ವೀಕ್ಷಣೆ ಪಡೆದುಕೊಂಡಿದೆ.
ಈಗಾಗಲೇ ಬಿಡುಗಡೆಯಾಗಿರುವ ಈ ವೆಬ್‌ಸೀರೀಸ್ ಕೆಲವೇ ದಿನಗಳಲ್ಲಿ ಭಾರಿ ವೀಕ್ಷಣೆ ಪಡೆದುಕೊಂಡಿದೆ. ಇನ್ನು, ವಿಹಾನ್ ಗೋಯೆಲ್ ಕಥೆಯ ಜೊತೆಗೆ ಸಂಕಲನವನ್ನೂ ಮಾಡಿದ್ದಾರೆ. ನಾನು ನಿರ್ದೇಶನದ ಜೊತೆಗೆ ಪ್ರೊಡಕ್ಷನ್‌ನಲ್ಲೂ ಕಾಣಿಸಿಕೊಂಡಿದ್ದಾರೆ. ಶಿವು ನವಲಿಮಠ್ ಮತ್ತು ಪೌಲ್ ಕ್ಯಾಮೆರಾ ಹಿಡಿದಿದ್ದಾರೆ.
ಈ ವೆಬ್‌ಸೀರೀಸ್ ನಿರ್ದೇಶಕ ಮಂಜುನಂದನ್ ಬಗ್ಗೆ ಹೇಳುವುದಾದರೆ, ಈ ಮೊದಲು ಹಿಂದಿಯಲ್ಲಿ ಆಲ್ಬಂ ಸಾಂಗ್ ಮಾಡಿದ್ದರು. ನಂತರದ ದಿನಗಳಲ್ಲಿ, ಅಲ್ಲೇ ಒಂದಷ್ಟು ಮಂದಿಯ ಪರಿಚಯವಾಗಿ, ಬಾಲಿವುಡ್ ಜನರ ಸಂಪರ್ಕ ಬೆಳೆಸಿಕೊಂಡು ಈ ವೆಬ್‌ಸೀರೀಸ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
“ಇನ್ನೊಂದು ವಿಶೇಷವೆಂದರೆ, ಈ ವೆಬ್‌ಸೀರೀಸ್ ಅನ್ನು, ಕನ್ನಡದಲ್ಲೂ ಮಾಡುವ ಯೋಚನೆ ನಿರ್ದೇಶಕರಿಗಿದೆ. “
ಅಂದಹಾಗೆ, ಈ “ಮೇರಿ ಪಡೋಸನ್” ವೆಬ್‌ಸೀರೀಸ್ ಮಹಾರಾಷ್ಟ್ರದ ಅಂಬೋಲಿಯ ರೆಸಾರ್ಟ್‌ವೊಂದರಲ್ಲಿ ಹದಿನೈದು ದಿನಗಳ ಕಾಲ ಚಿತ್ರೀಕರಿಸಲಾಗಿದೆ. ಇನ್ನೊಂದು ವಿಶೇಷವೆಂದರೆ, ಕಲಾವಿದರನ್ನು ಹೊರತುಪಡಿಸಿ ಈ ವೆಬ್‌ಸೀರೀಸ್‌ನಲ್ಲಿ ಬಹುತೇಕ ಕನ್ನಡಿಗರೇ ಸೇರಿ ಕೆಲಸ ಮಾಡಿರುವುದು ವಿಶೇಷ. “