ಸುಕೇಶ್ ಶೆಟ್ಟಿ ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬಂದಿರುವ `ದೂರದರ್ಶನ’ ಸಿನಿಮಾ ಮಾರ್ಚ್ ೩ರಂದು ಬಿಡುಗಡೆ ಆಗಲಿದೆ. ಚಿತ್ರದಲ್ಲಿ ದಿಯಾ ಖ್ಯಾತಿಯ ಪೃಥ್ವಿ ಅಂಬರ್ ಹಾಗೂ ಅಯಾನ ನಾಯಕ ನಾಯಕಿಯಾಗಿ ನಟಿಸಿದ್ದಾರೆ. ಡ್ರಾಮಾ ಹಾಗೂ ಹ್ಯೂಮರ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.
ಒಂದು ಕಾದಂಬರಿ ಓದಿದ ಅನುಭವವನ್ನು ಈ ಸಿನಿಮಾ ಎಲ್ಲರಿಗೂ ನೀಡುತ್ತೆ. ತಾನು ಮನು ಎಂಬ ಪಾತ್ರ ಮಾಡಿದ್ದೇನೆ. ಬಾಲ್ಯದಲ್ಲಿ ಮಾಡಿದ ತರಲೆ ಎಲ್ಲವನ್ನು ಈ ಚಿತ್ರದಲ್ಲಿ ಕಟ್ಟಿಕೊಡಲಾಗಿದೆ. ದೂರದರ್ಶನ ಒಂದು ಒಳ್ಳೆಯ ಕಂಟೆAಟ್ ಸಿನಿಮಾ. ಲವ್ ಸ್ಟೋರಿ, ಕಾಮಿಡಿ, ಎಮೋಷನ್ಸ್ ಎಲ್ಲವೂ ಈ ಚಿತ್ರದಲ್ಲಿದೆ ಎಂದು ಪೃಥ್ವಿ ಅಂಬರ್ ಹೇಳಿದ್ದಾರೆ.

ಈ ಸಿನಿಮಾ ನಮ್ಮ ನಿರ್ದೇಶಕರ ಡ್ರೀಮ್ ಪ್ರಾಜೆಕ್ಟ್. ಈ ಚಿತ್ರದಲ್ಲಿ ತನಗೆ ಅವಕಾಶ ಕೊಟ್ಟಿದ್ದಕ್ಕೆ ತುಂಬಾ ಧನ್ಯವಾದ ತಿಳಿಸುತ್ತೇನೆ. ಚಿತ್ರದಲ್ಲಿ ಮೈತ್ರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಸಿಂಪಲ್ ಹುಡುಗಿ ಪಾತ್ರ. ಲವ್ ಸ್ಟೋರಿ ಕೂಡ ಇದೆ. ಎಲ್ಲಾ ಕಲಾವಿದರೊಂದಿಗೆ ನಟಿಸಿದ್ದು ತುಂಬಾ ಖುಷಿ ಕೊಟ್ಟಿದೆ ಎಂದು ಅಯಾನ ಸಂತಸ ವ್ಯಕ್ತಪಡಿಸುತ್ತಾರೆ.
ರೆಗ್ಯೂಲರ್ ಸ್ಟೆöÊಲ್ ಬಿಟ್ಟು ತುಂಬಾ ಆಪ್ತವಾಗೋ ಹಾಗೆ ಸಿನಿಮಾವನ್ನು ನರೇಟ್ ಮಾಡಲಾಗಿದೆ. ಎರಡು ಕಾಲು ಗಂಟೆ ಒಂದು ಊರೊಳಗೆ ಹೋಗಿ ಎಂಜಾಯ್ ಮಾಡಿದ ಅನುಭವವನ್ನು ಈ ಸಿನಿಮಾ ಪ್ರತಿಯೊಬ್ಬರಿಗೂ ನೀಡಲಿದೆ ಎಂದು ನಿರ್ದೇಶಕ ಸುಕೇಶ್ ಶೆಟ್ಟಿ ತಿಳಿಸಿದ್ದಾರೆ.
ವಿಎಸ್ ಎಂಟರ್ಟೈನ್ಮೆAಟ್ ಬ್ಯಾನರ್‌ನಡಿ ರಾಜೇಶ್ ಭಟ್ ಚಿತ್ರವನ್ನು ನಿರ್ಮಾಣ ಮಾಡಿದ್ದು, ಉಗ್ರಂ ಮಂಜು ಕಾರ್ಯಕಾರಿ ನಿರ್ಮಾಣ ಮಾಡುವುದರ ಜತೆಗೆ ನಟನೆಯನ್ನು ಕೂಡ ಮಾಡಿದ್ದಾರೆ. ಸುಂದರ್, ಹರಿಣಿ, ದೀಪಕ್ ರೈ ಪಾಣಾಜೆ, ರಘು ರಮಣಕೊಪ್ಪ, ಹುಲಿ ಕಾರ್ತಿಕ್, ಸೂರಜ್ ಮಂಗಳೂರು, ಸೂರ್ಯ ಕುಂದಾಪುರ ಒಳಗೊಂಡ ತಾರಾಗಣ ಚಿತ್ರದಲ್ಲಿದೆ. ಅರುಣ್ ಸುರೇಶ್ ಛಾಯಾಗ್ರಹಣ ಮಾಡಿದ್ದು, ಪ್ರದೀಪ್ ಆರ್ ರಾವ್ ಸಂಕಲನ, ನಂದೀಶ್ ಟಿ.ಜಿ ಸಂಭಾಷಣೆ, ವಾಸುಕಿ ವೈಭವ ಸಂಗೀತ ಚಿತ್ರಕ್ಕಿದೆ.
