ಕನ್ನಡ ಚಿತ್ರರಂಗಕ್ಕೆ ಮತ್ತೊಬ್ಬ ‘ಸೂಪರ್ ಸ್ಟಾರ್’ “ನಿರಂಜನ್ ಸುಧೀಂದ್ರ”.
ಉದಯೋನ್ಮುಖ ನಿರ್ದೇಶಕ ರಮೇಶ್ ವೆಂಕಟೇಶ್ ಬಾಬು ರವರ ನಿರ್ದೇಶನದ ‘ಸೂಪರ್ ಸ್ಟಾರ್’ ಚಿತ್ರದ ಪೋಸ್ಟರ್ ಸಾಕಷ್ಟು ಸದ್ದು ಮಾಡಿದ್ದ ನಂತರ ‘ಸೂಪರ್ಸ್ಟಾರ್’ ಚಿತ್ರದ ಅದ್ಧೂರಿ ಮುಹೂರ್ತ ಅಂಜನಾನಗರದಲ್ಲಿನ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು.
ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ ರಮೇಶ್ ಕಥೆ ಮತ್ತು ಚಿತ್ರಕಥೆಯನ್ನು ಬರೆದಿದ್ದಾರೆ. ಮೈಲಾರಿ ಪ್ರೊಡಕ್ಷನ್ಸ್ ಸಹಯೋಗದೊಂದಿಗೆ ಆರ್‌ವಿಬಿ ಸಿನೆಮಾಸ್ ಎಂಬ ಬ್ಯಾನರ್ ಅಡಿಯಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
ನಿರ್ದೇಶಕ ರಮೇಶ್ ವೆಂಕಟೇಶ್ ಬಾಬು ಅವರ ತಾಯಿ ಶ್ರೀಮತಿ ಗೌರಮ್ಮ ಮುನಿಯಪ್ಪ ಕ್ಲಾಪ್ ಮಾಡಿದರೆ, ಶ್ರೀಮತಿ ಲಕ್ಷ್ಮೀ ಕ್ಯಾಮರಾಕ್ಕೆ ಚಾಲನೆ ನೀಡಿದರು.
‘ಸೂಪರ್ ಸ್ಟಾರ್’ ಚಿತ್ರದಲ್ಲಿ ಅದ್ದೂರಿ ತಾಂತ್ರಿಕ ವರ್ಗ…!!!
ವಿಜಯ್ ಮಾಸ್ಟರ್ ಅವರು ಈ ಚಿತ್ರಕ್ಕೆ ಸಾಹಸ ನಿರ್ದೇಶನ ಮಾಡಲಿದ್ದಾರೆ. ಯೋಗಿ ಕ್ಯಾಮರಾ, ರಾಘವೇಂದ್ರ ವಿ ಸಂಗೀತ, ವಿಜಯ್ ಕುಮಾರ್ ಸಂಕಲನ, ಮೋಹನ್ ಅವರು ಈ ಚಿತ್ರಕ್ಕೆ ಕಲಾ ನಿರ್ದೇಶನ ಮಾಡಲಿದ್ದಾರೆ.
ಪ್ರಸಿದ್ಧ ನೃತ್ಯ ಸಂಯೋಜಕ ಮತ್ತು ಹಿರಿಯ ನಟ ಸುಂದರ್ ಮುಗೂರ್ ಅವರನ್ನು ಪ್ರಮುಖ ಪಾತ್ರದಲ್ಲಿ ಕರೆತರುವಲ್ಲಿ ಚಿತ್ರತಂಡ ಯಶಸ್ವಿಯಾಗಿದೆ ಮತ್ತು ಅವರಿಂದ ಮೆಚ್ಚುಗೆಯನ್ನು ಪಡೆದಿದ್ದಾರೆ. ಅವರು ಶೀಘ್ರದಲ್ಲೇ ಚಿತ್ರೀಕರಣಕ್ಕಾಗಿ ತಂಡವನ್ನು ಸೇರಿಕೊಳ್ಳಲಿದ್ದಾರೆ. ಇನ್ನುಳಿದ ತಾರಾಗಣದ ಆಯ್ಕೆಯೂ ನಡೆಯುತ್ತಿದ್ದು, ಶೀಘ್ರದಲ್ಲಿ ಅದನ್ನು ಬಹಿರಂಗ ಪಡಿಸಲಿದ್ದಾರೆ.
‘ಸೂಪರ್ ಸ್ಟಾರ್’ ಚಿತ್ರದ ಟೀಸರ್ ಗೆ ರಾಕಿಂಗ್ ಸ್ಟಾರ್ ಧ್ವನಿ ನೀಡಿದ್ದಾರೆ…!!!!
ನಿರಂಜನ್ ಸುಧೀಂದ್ರ ಅವರ ಸೂಪರ್ ಸ್ಟಾರ್ ಚಿತ್ರದ ಟೀಸರ್ ಗೆ ರಾಕಿಂಗ್ ಸ್ಟಾರ್ ಧ್ವನಿ ನೀಡಿದ್ದಾರೆ. ಆಗಸ್ಟ್‌ನಲ್ಲಿ ಬಿಡುಗಡೆಯಾದ ಚಿತ್ರದ ಮೊದಲ ಟೀಸರ್ ಕೂಡ ಸಾಕಷ್ಟು ಸಂಚಲನವನ್ನು ಸೃಷ್ಟಿಸಿತು ಮತ್ತು ಶೀರ್ಷಿಕೆ ಗೀತೆ ಕೂಡ ಕೇಳುಗರ ಮನ ಗೆದ್ದಿದೆ.
ಖಡಕ್ ಡೈಲಾಗ್ ಹೇಳುವ ಮೂಲಕ ಚಪ್ಪಾಳೆ ಗಿಟ್ಟಿಸಿಕೊಂಡ “ನಿರಂಜನ್ ಸುಧೀಂದ್ರ”…!!!!
ಈ ಚಿತ್ರದ ಮುಖೇನ ನಿರಂಜನ್ ಸುಧೀಂದ್ರ ಅವರಿಗೆ ನಾಯಕನಟನಾಗಿ ಚೊಚ್ಚಲ ಚಿತ್ರವಾಗಿದೆ. ಈ ಹಿಂದೆ ನಿರಂಜನ್ ಅವರು ಪ್ರಿಯಾಂಕಾ ಉಪೇಂದ್ರ ಅವರೊಂದಿಗೆ 2 ನೇ ಹಾಫ್ ಚಿತ್ರದಲ್ಲಿ ಮೊದಲ ಬಾರಿಗೆ ತೆರೆ ಮೇಲೆ ಕಾಣಿಸಿಕೊಂಡಿದ್ದರು.
“ಲೇ ಮಚ್ಚಾ.. ತೆಳ್ಳಗೆ ಬೆಳ್ಳಗೆ ಇದಾನೆ ಅಂತ ಲಿಟಲ್ ಸ್ಟಾರ್ ಅಂದ್ಕೊಂಡ್ಬಿಟ್ಟೇನೋ ಮಗನೇ.. ರಿಯಲ್ ಸ್ಟಾರ್ ಗರಡಿಯಲ್ಲಿ ಪಳಗಿರೋ ಸೂಪರ್ಸ್ಟಾರ್ ಕಣೋ.. ಕರೆದ ತಕ್ಷಣ ಬರೋಕೆ ಡಾನ್ಸರ್ಸ್ ಏನು ನಿನ್ನ ಕಟ್ಕೋಂಡಿರೋಳಾ ಏನು ಇಟ್ಕೋಂಡಿರೋಳಾ ಮಗನೇ..” ಹೀಗೆ ಖಡಕ್ ಡೈಲಾಗ್ ಹೇಳುವ ಮೂಲಕ ಚಪ್ಪಾಳೆ ಗಿಟ್ಟಿಸಿಕೊಂಡ ನಿರಂಜನ್ ಸುಧೀಂದ್ರ.
ನಿರಂಜನ್ ಸುಧೀಂದ್ರ ಹೈಟ್, ಸ್ಟೈಲ್, ವರ್ಕೌಟ್ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದೆ ಅಂತಾ ಹೇಳಬಹುದು.
ಕೆಲವು ತಿಂಗಳ ಹಿಂದೆ ‘ಸೂಪರ್ ಸ್ಟಾರ್’ ಚಿತ್ರದ ಶೀರ್ಷಿಕೆಯನ್ನು ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಪ್ರಿಯಾಂಕಾ ಉಪೇಂದ್ರ ಬಿಡುಗಡೆ ಮಾಡಿದ್ದರು ಹಾಗೂ ಕ್ಯಾರೆಕ್ಟರ್ ಟೀಸರ್ ಯನ್ನು ಬಿಡುಗಡೆ ಮಾಡಿದ್ದು ರೋರಿಂಗ್ ಸ್ಟಾರ್ ಶ್ರೀಮುರುಳಿ.
ಇನ್ನು ಚಿತ್ರದ ಲಿರಿಕಲ್ ವಿಡಿಯೋವನ್ನು ಲವ್ಲಿ ಸ್ಟಾರ್ ಪ್ರೇಮ್ ಬಿಡುಗಡೆ ಮಾಡಿದರು.